Home ಟಾಪ್ ಸುದ್ದಿಗಳು ಸೆಪ್ಟೆಂಬರ್ 12ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ

ಸೆಪ್ಟೆಂಬರ್ 12ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ

ಬೆಂಗಳೂರು: ದ್ವಿತೀಯ ಪಿಯುಸಿಯ ಪೂರಕ ಪರೀಕ್ಷಾ ಫಲಿತಾಂಶವನ್ನು ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆಯ ಫಲಿತಾಂಶವು ಬೆಳಗ್ಗೆ 11 ಗಂಟೆಯ ಬಳಿಕ ಸಚಿವಾಲಯದ ಅಧಿಕೃತ ವೆಬ್’ಸೈಟ್’ನಲ್ಲಿ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ /karresults.nic.in ಅನ್ನು ಸಂಪರ್ಕಿಸಬಹುದು ಎಂದು ಟ್ವೀಟ್ ಮೂಲಕ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

Join Whatsapp
Exit mobile version