ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ

Prasthutha|

ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆ 6,66,497 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 3,35,138 ವಿದ್ಯಾರ್ಥಿಗಳು ಹಾಗೂ 3,31,359 ವಿದ್ಯಾರ್ಥಿನಿಯರಿದ್ದಾರೆ.

- Advertisement -

ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡದ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದಿದ್ದಾರೆ. ಬೆಂಗಳೂರು ದಕ್ಷಿಣ ಎರಡನೇ ಸ್ಥಾನ ಗಳಿಸಿದೆ. ಬೆಂಗಳೂರು ದಕ್ಷಿಣದ 302 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಲಭಿಸಿದೆ. ಬೆಂಗಳೂರು ಉತ್ತರ 3ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಉತ್ತರದ 261 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಸಿಕ್ಕಿದೆ. ಹಾಗೂ ಈ ಬಾರಿ ಉಡುಪಿ ಜಿಲ್ಲೆಗೆ 4ನೇ ಸ್ಥಾನ ಲಭ್ಯವಾಗಿದೆ.

ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ. ಎಸ್ ಎಂ ಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್ ಎಸ್ ಎಲ್ ಸಿ, ಫಸ್ಟ್ ಪಿಯುಸಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ ಕೃಪಾಂಕ ಅನುಸರಿಸಿ ಫಲಿತಾಂಶವನ್ನು ನೀಡಲಾಗಿದೆ.

Join Whatsapp