ದ್ವಿತೀಯ ಪಿಯುಸಿ ಫಲಿತಾಂಶ: ರಿಸಲ್ಟ್ ತಿರಸ್ಕರಿಸಿದ 36 ವಿದ್ಯಾರ್ಥಿಗಳು ಫೇಲ್ !

Prasthutha|

ಬೆಂಗಳೂರು: ಕೊರೋನಾ ಕಾರಣದಿಂದ ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲಾಗಿತ್ತು. ಆದರೆ ಪಿಯು ಇಲಾಖೆ ನೀಡಿದ್ದ ಫಲಿತಾಂಶವನ್ನು ತಿರಸ್ಕರಿಸಿ, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶ ಇಂದು ಪ್ರಕಟವಾಗಿದೆ.

- Advertisement -

ಇದೇ ಆಗಸ್ಟ್/ಸೆಪ್ಟೆಂಬರ್ ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಮವಾರ ಪ್ರಕಟಿಸಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು 18,413 ವಿದ್ಯಾರ್ಥಿಗಳಲ್ಲಿ 5,507 ( ಶೇಕಡ 29.91) ತೇರ್ಗಡೆಯಾಗಿದ್ದಾರೆ.

ಒಟ್ಟು ವಿದ್ಯಾರ್ಥಿಗಳ ಪೈಕಿ ಬಾಲಕಿಯರು ಮೇಲುಗೈ ಸಾಧಿಸಿದ್ದು, ಶೇ.36.72ರಷ್ಟು ಉತ್ತೀರ್ಣರಾಗಿದ್ದರೆ, ಬಾಲಕರು ಶೇ.26.06ರಷ್ಟು ತೇರ್ಗಡೆಯಾಗಿದ್ದಾರೆ.
ಪರೀಕ್ಷೆ ಬರೆದ ಒಟ್ಟು 592 ಹೊಸಬರಲ್ಲಿ 556 ತೇರ್ಗಡೆ (93.92%) ಹೊಂದಿದ್ದು, 36 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಪುನರಾವರ್ತಿತ 351 ರಲ್ಲಿ 183 ಪಾಸ್ (52.29%), 168. ಫೇಲ್, ಖಾಸಗಿ 17,470 ರಲ್ಲಿ 4,768 ಉತ್ತೀರ್ಣ (27.29%), 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ.

Join Whatsapp