ಮುಂಬೈ: ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಮತ್ತು ವಜಾಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ನಡುವಿನ ‘ರಹಸ್ಯ’ ಸಭೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿರುವುದಾಗಿ ವರದಿಯಾಗಿದೆ.
ಕಳೆದ ವರ್ಷ ನವೆಂಬರ್‌ನಲ್ಲಿ ದಕ್ಷಿಣ ಮುಂಬೈನ ಕಟ್ಟಡವೊಂದರಲ್ಲಿ ಜಸ್ಟೀಸ್ ಚಾಂಡಿವಾಲ್ ಆಯೋಗದ ಕೊಠಡಿಯ ಪಕ್ಕದ ಕೊಠಡಿಯಲ್ಲಿ ಇಬ್ಬರೂ ಭೇಟಿಯಾಗಿದ್ದರು.
ಮುಂಬೈ ಪೊಲೀಸ್ ಕಮಿಷನರ್ ಹುದ್ದೆಯಿಂದ ವಜಾಗೊಂಡ ನಂತರ ಪರಮ್ ಬೀರ್ ಸಿಂಗ್ ಅವರು ಆಗಿನ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಮೇಲೆ ಹೊರಿಸಲಾದ ಭ್ರಷ್ಟಾಚಾರದ ಆರೋಪಗಳನ್ನು ಏಕಸದಸ್ಯ ಸಮಿತಿಯು ತನಿಖೆ ನಡೆಸುತ್ತಿದೆ.
ಮುಂಬೈ ಪೊಲೀಸ್‌ನ ಸ್ಥಳೀಯ ಶಸ್ತ್ರಾಸ್ತ್ರ ಘಟಕದ ನಾಲ್ವರು ಸಿಬ್ಬಂದಿ ವಾಜೆ ಅವರನ್ನು ತಲೋಜಾ ಜೈಲಿನಿಂದ ದಕ್ಷಿಣ ಮುಂಬೈನಲ್ಲಿ ಆಯೋಗದ ಮುಂದೆ ವಿಚಾರಣೆಗೆ ಕರೆದೊಯ್ದಿದ್ದರು. ಈ ಸಂದರ್ಭ ಅವರು ಮತ್ತು ಮರಮ್ ಬೀರ್ ಸಿಂಗ್ ರಹಸ್ಯವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಡಿಸಿಪಿ ಅವರ ಕಚೇರಿಯಿಂದ ನಾಲ್ವರು ಪೊಲೀಸರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.