ಸಚಿನ್ ವಾಜೆ- ಪರಂ ಬೀರ್ ಸಿಂಗ್ ರಹಸ್ಯ ಭೇಟಿ| ನಾಲ್ವರು ಪೊಲೀಸರಿಗೆ ನೋಟೀಸ್

Prasthutha: January 18, 2022

ಮುಂಬೈ: ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಮತ್ತು ವಜಾಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ನಡುವಿನ ‘ರಹಸ್ಯ’ ಸಭೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿರುವುದಾಗಿ ವರದಿಯಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ದಕ್ಷಿಣ ಮುಂಬೈನ ಕಟ್ಟಡವೊಂದರಲ್ಲಿ ಜಸ್ಟೀಸ್ ಚಾಂಡಿವಾಲ್ ಆಯೋಗದ ಕೊಠಡಿಯ ಪಕ್ಕದ ಕೊಠಡಿಯಲ್ಲಿ ಇಬ್ಬರೂ ಭೇಟಿಯಾಗಿದ್ದರು.


ಮುಂಬೈ ಪೊಲೀಸ್ ಕಮಿಷನರ್ ಹುದ್ದೆಯಿಂದ ವಜಾಗೊಂಡ ನಂತರ ಪರಮ್ ಬೀರ್ ಸಿಂಗ್ ಅವರು ಆಗಿನ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಮೇಲೆ ಹೊರಿಸಲಾದ ಭ್ರಷ್ಟಾಚಾರದ ಆರೋಪಗಳನ್ನು ಏಕಸದಸ್ಯ ಸಮಿತಿಯು ತನಿಖೆ ನಡೆಸುತ್ತಿದೆ.

ಮುಂಬೈ ಪೊಲೀಸ್‌ನ ಸ್ಥಳೀಯ ಶಸ್ತ್ರಾಸ್ತ್ರ ಘಟಕದ ನಾಲ್ವರು ಸಿಬ್ಬಂದಿ ವಾಜೆ ಅವರನ್ನು ತಲೋಜಾ ಜೈಲಿನಿಂದ ದಕ್ಷಿಣ ಮುಂಬೈನಲ್ಲಿ ಆಯೋಗದ ಮುಂದೆ ವಿಚಾರಣೆಗೆ ಕರೆದೊಯ್ದಿದ್ದರು. ಈ ಸಂದರ್ಭ ಅವರು ಮತ್ತು ಮರಮ್ ಬೀರ್ ಸಿಂಗ್ ರಹಸ್ಯವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಡಿಸಿಪಿ ಅವರ ಕಚೇರಿಯಿಂದ ನಾಲ್ವರು ಪೊಲೀಸರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!