ಮಂಗಳೂರು: ರಾಜ್ಯಾದ್ಯಂತ ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಫೆ.14ರ ಮುಂಜಾನೆ 6ರಿಂದ ಫೆ.19ರ ಸಂಜೆ 6 ಗಂಟೆಯವರೆಗೆ ದ.ಕ.ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200 ಮೀಟರ್‌ನೊಳಗೆ ಸೆ.144 ಜಾರಿಗೊಳಿಸಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಶಾಲಾ ಕಾಲೇಜಿನ 200 ಮೀಟರ್ ಸುತ್ತಮುತ್ತಲು 5ಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ, ಮೆರವಣಿಗೆ, ಸಭೆ ನಡೆಸುವಂತಿಲ್ಲ.ಹಾಗೂ ಯಾವುದೇ ಆಯುಧ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಅದಕ್ಕೆ ಪೂರಕವಾದ ಯಾವುದೇ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ ಎಂದು ಸೂಚಿಸಿದ್ದಾರೆ.
ಇನ್ನು ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಯವರು ಸ್ಷಷ್ಟಪಡಿಸಿದ್ದಾರೆ.