ನಾಳೆ ಮತ ಏಣಿಕೆ | ಸುರತ್ಕಲ್ ಎನ್ಐಟಿಕೆಯಲ್ಲಿ ಬಿಗಿ ಭದ್ರತೆ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

Prasthutha|

►ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭವಾಗಲಿದೆ: ಜಿಲ್ಲಾಧಿಕಾರಿ

- Advertisement -


ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 13ರಂದು ಆರಂಭವಾಗಲಿದ್ದು, ಸುರತ್ಕಲ್ ಎನ್ ಐಟಿಕೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.


ಈ ಬಗ್ಗೆ ಎನ್ಐಟಿಕೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 10 ರಂದು ನಡೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 77.39% ಮತದಾನವಾಗಿದೆ. ಅಂಚೆ ಮತಗಳ ಎಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದ್ದು, ನಂತರ ಇವಿಎಂಗಳ ಎಣಿಕೆ ಬೆಳಿಗ್ಗೆ 8:30 ಕ್ಕೆ ನಡೆಯಲಿದೆ.

- Advertisement -


ಅಭ್ಯರ್ಥಿಗಳು ಅಥವಾ ಅವರ ಏಜೆಂಟರು ರಿಟರ್ನಿಂಗ್ ಅಧಿಕಾರಿಗಳ ಪಕ್ಕದಲ್ಲಿ ಕುಳಿತುಕೊಳ್ಳಲು ಸಾಕಷ್ಟು ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಪ್ರತಿ ಟೇಬಲ್ ನ ಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಯಾವುದೇ ಅಕ್ರಮಗಳು ನಡೆಯದಂತೆ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಗಳು ಮೇಲ್ವಿಚಾರಣೆ ನಡೆಸಲಿವೆ ಎಂದು ಜಿಲ್ಲಾಧಿಕಾರಿ ಹೇಳಿದರು.


ಮತ ಎಣಿಕೆ ಕೇಂದ್ರದಲ್ಲಿ 300 ಹೆಡ್ ಕಾನ್ಸ್ಟೇಬಲ್ ಗಳು, 14 ಇನ್ಸ್ಪೆಕ್ಟರ್ ಗಳು , 2 ಡಿಸಿಪಿಗಳು, 400 ಸಿವಿಲ್ ಪೊಲೀಸ್ ಸಿಬ್ಬಂದಿ, 39 ಸಹಾಯಕ ಸಬ್ಇನ್ಸ್ಪೆಕ್ಟರ್ ಗಳು, 200 ಗೃಹರಕ್ಷಕರು, 4 ತುಕಡಿಗಳು, ಕೆಎಸ್ ಆರ್ ಪಿ ತುಕಡಿಗಳು ಮತ್ತು ಸಿಎಪಿಎಫ್ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

Join Whatsapp
Exit mobile version