ಬೆಳಗಾವಿ: ಲೋಕಸಭೆಯಲ್ಲಿ ‘ಭದ್ರತಾ ಲೋಪ’ ನಡೆದು ಆಗಂತುಕರು ಸದನದೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ಬೆಳಗಾವಿಯ ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಿಸಿ, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸುವರ್ಣ ವಿಧಾನಸೌಧದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತಮ್ಮ ಚೇಂಬರ್ ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಎಲ್ಲೆಡೆ ಕಟ್ಟೆಚ್ಚರ ವಹಿಸುವಂತೆ ನಿರ್ದೇಶನಗಳನ್ನು ನೀಡಿದರು.