Home ಟಾಪ್ ಸುದ್ದಿಗಳು ಲೋಕಸಭೆಯಲ್ಲಿ ಭದ್ರತಾ ವೈಫಲ್ಯ: ನಾಳೆ ರಾಷ್ಟ್ರಪತಿ ಭೇಟಿ ಮಾಡಲಿರುವ ‘INDIA’

ಲೋಕಸಭೆಯಲ್ಲಿ ಭದ್ರತಾ ವೈಫಲ್ಯ: ನಾಳೆ ರಾಷ್ಟ್ರಪತಿ ಭೇಟಿ ಮಾಡಲಿರುವ ‘INDIA’

ನವದೆಹಲಿ: ಇಂದು ಲೋಕಸಭಾ ಕಲಾಪದ ಸಂದರ್ಭದಲ್ಲೇ ಭಾರೀ ಭದ್ರತಾ ವೈಫಲ್ಯದ ಕಾರಣದಿಂದ ಆತಂಕ ಸೃಷ್ಟಿಯಾಗಿದ್ದು, ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯಿಂದಾಗಿ ದೇಶದಲ್ಲಿನ ಕಾನೂನು ಸುವ್ಯವಸ್ಥೆಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಲು ರಾಷ್ಟ್ರಪತಿ ಮಧ್ಯ ಪ್ರವೇಶಲು ಮನವಿ ನೀಡಲು ‘INDIA’ ಮೈತ್ರಿಕೂಟದ ನಾಯಕರು ನಿರ್ಧರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ, ನಾಳೆ ಬೆಳಿಗ್ಗೆ 10 ಗಂಟೆಗೆ ಸಂಸತ್ತಿನಲ್ಲಿ ‘INDIA’ ಮೈತ್ರಿಕೂಟದ ನಾಯಕರ ಸಭೆ ನಡೆಯಲಿದ್ದು, ರಾಷ್ಟ್ರಪತಿಗಳಿಂದ ಸಮಯ ಕೋರಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ.

ನಾಳೆ ಉಭಯ ಸದನಗಳಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ವಿರೋಧ ಪಕ್ಷಗಳು ಒತ್ತಾಯಿಸಲಿವೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಲೋಕಸಭೆಯಲ್ಲಿ ಭದ್ರತಾ ಲೋಪದ ಬಗ್ಗೆ ವಿಪಕ್ಷಗಳ ನಾಯಕರು ತೀವ್ರವಾಗಿ ವಾಗ್ದಾಳಿ ನಡೆಸೋ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Join Whatsapp
Exit mobile version