ದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆಯ ಬಗ್ಗೆ ರಾಜಕೀಯ ಮಾಡುತ್ತಿರುವುದು ವಿಷಾದನೀಯ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.
ಪ್ರತಿಪಕ್ಷದ ಕೆಲ ಸಂಸದರು ತಮ್ಮ ಬೇಡಿಕೆಗಳಿರುವ ಫಲಕಗಳನ್ನು ಹಿಡಿದುಕೊಂಡಿದ್ದರು. ಸದನದೊಳಗೆ ಭಿತ್ತಿಪತ್ರಗಳನ್ನು ತರುತ್ತಿರುವುದನ್ನು ವಿರೋಧಿಸಿದ ಓಂ ಬಿರ್ಲಾ, ಇದು ಸದನದ ಘನತೆಯನ್ನು ಕುಗ್ಗಿಸುತ್ತದೆ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದು ವಿಷಾದನೀಯ. ಸದನದ ಬಾವಿಗೆ ನುಗ್ಗಿ ಘೋಷಣೆ ಕೂಗುವುದು ಸದನದ ಘನತೆಗೆ ವಿರುದ್ಧವಾಗಿದೆ. ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲು ನಿಮ್ಮ (ವಿರೋಧ ಪಕ್ಷದ) ಸಹಕಾರವನ್ನು ಕೋರುತ್ತೇನೆ ಎಂದು ಬಿರ್ಲಾ ಹೇಳಿದರು.