ನವದೆಹಲಿ: ಸಂಸತ್ ಭದ್ರತಾ ಲೋಪ ಪ್ರಕರಣ ಸಂಬಂಧ ಬಿಜೆಪಿ ಸಂಸದ ಪ್ರತಾಪ ಸಿಂಹ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಶುಕ್ರವಾರ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.13ರ ಸಂಸತ್ ಭದ್ರತಾ ಲೋಪ ಸಂಬಂಧ ತನಿಖೆ ನಡೆಯುತ್ತಿದೆ. ವರದಿ ಸಲ್ಲಿಕೆ ಮಾಡಿದ ಬಳಿಕ ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ ಎಂದು ಜೋಶಿ ಹೇಳಿದ್ದಾರೆ.