Home ಟಾಪ್ ಸುದ್ದಿಗಳು ಕೊಳೆ ಬಟ್ಟೆ ಧರಿಸಿ ಬಂದಿದ್ದ ವ್ಯಕ್ತಿಗೆ ಮೆಟ್ರೊ ಪ್ರಯಾಣಕ್ಕೆ ನಿರಾಕರಣೆ: ಭದ್ರತಾ ಮೇಲ್ವಿಚಾರಕ ಸೇವೆಯಿಂದ ವಜಾ

ಕೊಳೆ ಬಟ್ಟೆ ಧರಿಸಿ ಬಂದಿದ್ದ ವ್ಯಕ್ತಿಗೆ ಮೆಟ್ರೊ ಪ್ರಯಾಣಕ್ಕೆ ನಿರಾಕರಣೆ: ಭದ್ರತಾ ಮೇಲ್ವಿಚಾರಕ ಸೇವೆಯಿಂದ ವಜಾ

ಬೆಂಗಳೂರು: ರೈತರೊಬ್ಬರು ಕೊಳೆ ಬಟ್ಟೆ ಧರಿಸಿಕೊಂಡು ಬಂದಿದ್ದಾರೆ ಎಂಬ ಕಾರಣಕ್ಕೆ ನಮ್ಮ ಮೆಟ್ರೋ ಸಿಬ್ಬಂದಿ ಅವರಿಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿರುವ ಆರೋಪ ಕೇಳಿ ಬಂದಿದೆ. ರಾಜಾಜಿನಗರ ಮೆಟ್ರೊ ನಿಲ್ದಾಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಹರಿದಾಡುತ್ತಿದೆ.


ಘಟನೆ ಬಗ್ಗೆ ಇಂದು ಸ್ಪಷ್ಟನೆ ನೀಡಿರುವ ಬಿಎಂಆರ್ಸಿಎಲ್, ‘ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ, ಭದ್ರತಾ ಮೇಲ್ವಿಚಾರಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ’ ಎಂದು X ತಾಣದಲ್ಲಿ ಮಾಹಿತಿ ನೀಡಿದೆ.


ರೈತನೆಂದು ಹೇಳಲಾದ ವೃದ್ದರೊಬ್ಬರು ತಲೆಮೇಲೆ ಗಂಟು ಹೊತ್ತುಕೊಂಡು ಮೆಟ್ರೋ ನಿಲ್ದಾಣ ಪ್ರವೇಶಿಸಿದ್ದರು. ಈ ವ್ಯಕ್ತಿ ಕೊಳೆ ಬಟ್ಟೆ ಧರಿಸಿದ್ದಾರೆಂದು ಭದ್ರತಾ ಸಿಬ್ಬಂದಿ ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಸ್ಥಳದಿಂದ ವಿಡಿಯೋ ಮಾಡಿ ಹರಿಬಿಟ್ಟಿದ್ದರು.

Join Whatsapp
Exit mobile version