ನೂತನ ಸರ್ಕಾರದ ಮೊದಲ ಅಧಿವೇಶನ| ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ

Prasthutha|

ಬೆಂಗಳೂರು: ಮೂರು ದಿನ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ.

- Advertisement -

ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಹಮ್ಮಿಕೊಳ್ಳುವ ಸಾಧ್ಯತೆಯಿದೆ. ಇದರಿಂದ ಅಧಿವೇಶನದ ಕಾರ್ಯ- ಕಲಾಪಗಳಿಗೆ ಅಡಚಣೆಯಾಗಿ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 6ರಿಂದ ಬುಧವಾರ ಮಧ್ಯರಾತ್ರಿ 12ರ ವರೆಗೆ ವಿಧಾನಸೌಧದ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಈ ಆದೇಶದ ಅನ್ವಯ ಈ ನಿಷೇಧ ಪ್ರದೇಶದಲ್ಲಿ ಐದಕ್ಕಿಂತ ಹೆಚ್ಚು ಮಂದಿ ಗುಂಪುಗೂಡುವಂತಿಲ್ಲ. ಮೆರವಣಿಗೆ ಮತ್ತು ಸಭೆ ನಡೆಸುವಂತಿಲ್ಲ. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು ಮೊದಲಾದ ಮಾರಕಾಸ್ತ್ರ ಒಯ್ಯುವಂತಿಲ್ಲ, ಯಾವುದೋ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಉಪಕರಣ ಸಾಗಾಟ, ಶೇಖರಣೆ ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿಗಳ ಪ್ರತಿಕೃತಿ ಪ್ರದರ್ಶನ, ಬಹಿರಂಗ ಘೋಷಣೆ ಕೂಗು ವುದನ್ನು ನಿಷೇಧಿಸಲಾಗಿದೆ ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

Join Whatsapp