ಪ್ರತಿಭಟಿಸಿದ ರೈತರ ವಿರುದ್ಧ ದೇಶದ್ರೋಹ ಪ್ರಕರಣ

Prasthutha|

ಚಂಡೀಗಡ: ವಿದ್ಯಾರ್ಥಿ ನಾಯಕರು, ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಸರ್ಕಾರಗಳ ಕ್ರಮಕ್ಕೆ ನ್ಯಾಯಾಲಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಬಳಿಕವೂ ಸರ್ಕಾರ ಇದೀಗ ಅನ್ನದಾತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದೆ.

- Advertisement -


ಜುಲೈ 11 ರಂದು ಸಿರ್ಸಾದಲ್ಲಿ ಕೇಂದ್ರದ ಕೃಷಿ ಕಾನೂನುಗಳು ಮತ್ತು ಬಿಜೆಪಿ ನಾಯಕರ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಹರಿಯಾಣ ಉಪ ಸ್ಪೀಕರ್ ರಣಬೀರ್ ಗಂಗ್ವಾ ಅವರ ಅಧಿಕೃತ ವಾಹನದ ಮೇಲೆ ದಾಳಿ ಮಾಡಿ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ರೈತರ ಗುಂಪಿನ ವಿರುದ್ಧ ಹರಿಯಾಣ ಪೊಲೀಸರು ದೇಶದ್ರೋಹದ ಆರೋಪಗಳನ್ನು ಮಾಡಿದ್ದಾರೆ.


ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಸಿರ್ಸಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅರ್ಪಿತ್ ಜೈನ್ ದೃಢಪಡಿಸಿದ್ದಾರೆ. ಆದರೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಅವರು ಬುಧವಾರ ತಿಳಿಸಿದರು.

- Advertisement -


ರೈತ ನಾಯಕರಾದ ಹರ್ ಚರಣ್ ಸಿಂಗ್, ಪ್ರಹ್ಲಾದ್ ಸಿಂಗ್ ವಿರುದ್ಧ ಸಿರ್ಸಾ ಠಾಣೆಯಲ್ಲಿ ಐಪಿಸಿ ಸೆಕ್ಷನ್ 124ಎ, 307, 186 ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ. ಇತರ 100ಕ್ಕೂ ಅಧಿಕ ಅಪರಿಚಿತರ ವಿರುದ್ಧ ಎಫ್ ಐಆರ್ ನಲ್ಲಿ ಹೆಸರಿಸಲಾಗಿದೆ.

Join Whatsapp