Home ಟಾಪ್ ಸುದ್ದಿಗಳು ರೈತ ಕ್ರಾಂತಿ | ಶಶಿ ತರೂರು, ರಾಜ್ ದೀಪ್ ಸರ್ದೇಸಾಯಿ ಸೇರಿದಂತೆ ಆರು ಪತ್ರಕರ್ತರ ವಿರುದ್ಧ...

ರೈತ ಕ್ರಾಂತಿ | ಶಶಿ ತರೂರು, ರಾಜ್ ದೀಪ್ ಸರ್ದೇಸಾಯಿ ಸೇರಿದಂತೆ ಆರು ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ನವದೆಹಲಿ : ಕಾಂಗ್ರೆಸ್ ನಾಯಕ ಶಶಿ ತರೂರ್, ಖ್ಯಾತ ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಸಹಿತ ಆರು ಮಂದಿ ಪತ್ರಕರ್ತರ ವಿರುದ್ಧ ಉತ್ತರ ಪ್ರದೇಶ ಸರಕಾರ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಇವೆಲ್ಲರ ಮೇಲೆ ಕ್ರಿಮಿನಲ್ ಪಿತೂರಿ ಮತ್ತು ಭಾರತೀಯ ದಂಡ ಸಂಹಿತೆಯಡಿ ದ್ವೇಷವನ್ನು ಉತ್ತೇಜಿಸುವುದು ಸೇರಿದಂತೆ ಹಲವು ಆರೋಪಗಳನ್ನು ಹೊರಿಸಲಾಗಿದೆ.

ದೆಹಲಿ ಸಮೀಪದ ನಗರದ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇರೆಗೆ ನೋಯ್ಡಾದ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಮೊದಲ ಎಫ್ ಐಆರ್ ದಾಖಲಾಗಿದೆ. ಶಶಿ ತರೂರ್ ಮತ್ತು ಪತ್ರಕರ್ತರಿಂದ ‘ಡಿಜಿಟಲ್ ಪ್ರಸಾರ’ ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್ ಗಳು ತಪ್ಪು ಸಂದೇಶದಿಂದ ಕೂಡಿದ್ದವು ಎಂದು ಆರೋಪಿಸಲಾಗಿದೆ.

ದೆಹಲಿ ಪೊಲೀಸರು ಒಬ್ಬ ರೈತನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸುದ್ದಿ ಹರಡಿದ್ದು ಕೆಂಪು ಕೋಟೆಯ ಮುತ್ತಿಗೆ ಮತ್ತು ಟ್ರಾಕ್ಟರ್ ರ್ಯಾಲಿಯಲ್ಲಿ ಹಿಂಸಾಚಾರಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಎಫ್ ಐಆರ್ ನಲ್ಲಿ ಪತ್ರಕರ್ತರಾದ ರಾಜ್ ದೀಪ್ ಸರ್ದೇಸಾಯಿ, ಮೃಣಾಲ್ ಪಾಂಡೆ, ವಿನೋದ್ ಜೋಸ್, ಜಾಫರ್ ಅಘಾ, ಪರೇಶ್ ನಾಥ್ ಮತ್ತು ಅನಂತ್ ನಾಥ್ ಹೆಸರು ಸೇರಿದೆ.

Join Whatsapp
Exit mobile version