ಲೋಕಸಭೆ ಚುನಾವಣೆ: ಶಿವಮೊಗ್ಗದಲ್ಲಿ 1.10 ಕೋಟಿ ರೂ. ಮೌಲ್ಯದ ಸೀರೆ ವಶ

Prasthutha|

ಶಿವಮೊಗ್ಗ: ಇಲ್ಲಿನ ಕೆ.ಆರ್.ಪುರಂ ಬಡಾವಣೆಯ ಖಾಸಗಿ ಉಗ್ರಾಣದ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು, ಅಲ್ಲಿ ದಾಖಲೆಗಳಿಲ್ಲದೆ ಸಂಗ್ರಹಿಸಿ ಇಟ್ಟಿದ್ದ ₹ 1.10 ಕೋಟಿ ಮೌಲ್ಯದ ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಅಧಿಕಾರಿಗಳ ತಂಡ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದೆ. ಉಗ್ರಾಣ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಸೇರಿದೆ ಎಂದು ತಿಳಿದುಬಂದಿದೆ.


‘ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಸೀರೆಗಳನ್ನು ತಂದಿರಿಸಲಾಗಿತ್ತೇ ಎಂಬುದು ಇನ್ನೂ ಖಚಿತಪಟ್ಟಿಲ್ಲ. ಸೂಕ್ತ ದಾಖಲೆಗಳು ಲಭ್ಯವಾಗದ ಕಾರಣ ಸೀರೆಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಸುಪರ್ದಿಗೆ ವಹಿಸಲಾಗಿದೆ.



Join Whatsapp