Home ಟಾಪ್ ಸುದ್ದಿಗಳು ಲೋಕಸಭೆ ಚುನಾವಣೆ: ಶಿವಮೊಗ್ಗದಲ್ಲಿ 1.10 ಕೋಟಿ ರೂ. ಮೌಲ್ಯದ ಸೀರೆ ವಶ

ಲೋಕಸಭೆ ಚುನಾವಣೆ: ಶಿವಮೊಗ್ಗದಲ್ಲಿ 1.10 ಕೋಟಿ ರೂ. ಮೌಲ್ಯದ ಸೀರೆ ವಶ

ಶಿವಮೊಗ್ಗ: ಇಲ್ಲಿನ ಕೆ.ಆರ್.ಪುರಂ ಬಡಾವಣೆಯ ಖಾಸಗಿ ಉಗ್ರಾಣದ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು, ಅಲ್ಲಿ ದಾಖಲೆಗಳಿಲ್ಲದೆ ಸಂಗ್ರಹಿಸಿ ಇಟ್ಟಿದ್ದ ₹ 1.10 ಕೋಟಿ ಮೌಲ್ಯದ ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಅಧಿಕಾರಿಗಳ ತಂಡ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದೆ. ಉಗ್ರಾಣ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಸೇರಿದೆ ಎಂದು ತಿಳಿದುಬಂದಿದೆ.


‘ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಸೀರೆಗಳನ್ನು ತಂದಿರಿಸಲಾಗಿತ್ತೇ ಎಂಬುದು ಇನ್ನೂ ಖಚಿತಪಟ್ಟಿಲ್ಲ. ಸೂಕ್ತ ದಾಖಲೆಗಳು ಲಭ್ಯವಾಗದ ಕಾರಣ ಸೀರೆಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಸುಪರ್ದಿಗೆ ವಹಿಸಲಾಗಿದೆ.

Join Whatsapp
Exit mobile version