ಪ್ರವಾಸಕ್ಕೆ ಹಿಂದಿ ಮಾತನಾಡುವ ವಿದ್ಯಾರ್ಥಿಗಳ ಆಯ್ಕೆ: ಆಕ್ರೋಶಕ್ಕೆ ಮಣಿದು ಯೂಟರ್ನ್ ಹೊಡೆದ ಶಿಕ್ಷಣ ಸಚಿವ

Prasthutha|

ಬೆಂಗಳೂರು: ಹೊರ ರಾಜ್ಯಗಳ ಪ್ರವಾಸಕ್ಕೆ ಕನ್ನಡ ವಿದ್ಯಾರ್ಥಿಗಳನ್ನು ಕಡೆಗಣಿಸಿ ಹಿಂದಿ ಮಾತನಾಡುವ ವಿದ್ಯಾರ್ಥಿಗಳ ಆಯ್ಕೆ ಮಾಡಿದ್ದಕ್ಕೆ ಕನ್ನಡಗರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಶಿಕ್ಷಣ ಸಚಿವರು ಯೂ ಟರ್ನ್ ಹೊಡೆದಿದ್ದಾರೆ.

- Advertisement -


ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕದಿಂದ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಹಿಂದಿ/ಇಂಗ್ಲೀಷ್ ಭಾಷೆ ಜ್ಞಾನ ಕಡ್ಡಾಯ ಎಂಬ ಸೂಚನೆಯನ್ನು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ನೀಡಿಲ್ಲ. ಈ ಗೊಂದಲಕ್ಕೆ ಕಾರಣವಾದ ಅಧಿಕಾರಿ/ಸಿಬ್ಬಂದಿ ವಿರುದ್ಧ ಇಲಾಖೆಯಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.


ಮಾಜಿ ಸಚಿವ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಮುಖಂಡರು, ಕನ್ನಡಪರ ಹೋರಾಟಗಾರರು ಸರ್ಕಾರದ ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.



Join Whatsapp