ಆನೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಜೀವವನ್ನೇ ಕಳೆದುಕೊಂಡ..!

Prasthutha: March 1, 2021

ಚತ್ತೀಸಗಢ: ರಾಯಗಢ ಜಿಲ್ಲೆಯ ಗುಧಯ್ರಿ ಗ್ರಾಮದ ಸಾರಂಗಗಢ ಅರಣ್ಯ ಪ್ರದೇಶದಲ್ಲಿ ಆನೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಲು ಪ್ರಯತ್ನಿಸಿದ 21 ವರ್ಷದ ಯುವಕನನ್ನು ಕಾಡಾನೆ ಕೊಂದು ಹಾಕಿದ ಘಟನೆ ನಡೆದಿದೆ .
ಮೃತ ಯುವಕ ಮನೋಹರ್​ ಪಟೇಲ್​ ಮೂವರು ಗೆಳೆಯರ ಜೊತೆ ಸೇರಿ ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿ ಆನೆಯ ತುಂಬಾ ಸಮೀಪಕ್ಕೆ ಹೋಗಿದ್ದರು ಎಂದು ರಾಯ್​ಗಢ ಅರಣ್ಯ ಇಲಾಖೆ ವಿಭಾಗದ ಡಿಎಫ್​ಓ ಪ್ರಣಯ್​ ಮಿಶ್ರಾ ಹೇಳಿದ್ದಾರೆ.

ಯುವಕರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಂತೆಯೇ ಆಕ್ರೋಶಗೊಂಡ ಆನೆ ಕೂಡಲೇ ಈ ನಾಲ್ವರ ಮೇಲೆ ದಾಳಿ ಮಾಡಿದೆ. ಮೂವರು ಆನೆಯ ಆಕ್ರಮಣದಿಂದ ತಪ್ಪಿಸಿಕೊಂಡಿದ್ದು, ಪಟೇಲ್​ ಮಾತ್ರ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮೃತ ಯುವಕನ ಕುಟುಂಬಕ್ಕೆ 25 ಸಾವಿರ ರೂಪಾಯಿ ಶೀಘ್ರ ಪರಿಹಾರ ನೀಡಲಾಗಿದೆ.

ಈ ಆನೆ ಪಟೇಲ್​ಗೂ ಮೊದಲು ಮಲ್ದಾ ಗ್ರಾಮದಲ್ಲಿ ವೃದ್ಧ ಮಹಿಳೆಯನ್ನು ಶುಕ್ರವಾರ ಕೊಲೆ ಮಾಡಿತ್ತು. ಕೆಲ ದಿನಗಳ ಹಿಂದಷ್ಟೇ ಈ ಆನೆ ಸಾರಂಗಗಢ ಪ್ರದೇಶಕ್ಕೆ ಬಂದಿತ್ತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!