ತ್ರಿಪುರಾಗೆ ಹೆಚ್ಚುವರಿ ಕೇಂದ್ರ ಸಶಸ್ತ್ರ ಪಡೆಯನ್ನು ತಕ್ಷಣವೇ ನಿಯೋಜಿಸುವಂತೆ ಸುಪ್ರೀಂ ಕೋರ್ಟ್ ಆದೇಶ

Prasthutha|


ಬಿಜೆಪಿಯ ಬೆದರಿಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿರೋಧ ಪಕ್ಷಗಳು

- Advertisement -

ಹೊಸದಿಲ್ಲಿ: ತ್ರಿಪುರಾದಲ್ಲಿ ಎರಡು ಹೆಚ್ಚುವರಿ CAPF (ಕೇಂದ್ರ ಸಶಸ್ತ್ರ ಪೊಲೀಸ್ ಪಡೆ) ನಿಯೋಜನೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ತ್ರಿಪುರಾದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮತದಾರರನ್ನು ಬೆದರಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು.

ಚುನಾವಣೆಯಲ್ಲಿ ಮತ ಚಲಾಯಿಸದಂತೆ ಬಿಜೆಪಿ ಕಾರ್ಯಕರ್ತರು ಬೆದರಿಕೆ ಹಾಕುತ್ತಿದ್ದಾರೆ ಎಂದು ವಿರೋಧ ಪಕ್ಷವಾದ ಸಿಪಿಐ(ಎಂ) ತನ್ನ ಅರ್ಜಿಯಲ್ಲಿ ಹೇಳಿದೆ.

- Advertisement -

ತೃಣಮೂಲ ಕಾಂಗ್ರೆಸ್ ಕೂಡ ಬಿಜೆಪಿ ವಿರುದ್ಧ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಬಿಜೆಪಿಗರು ತಮ್ಮ ಕಾರ್ಯಕರ್ತರನ್ನು ಮತಗಟ್ಟೆಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

Join Whatsapp