Home ಟಾಪ್ ಸುದ್ದಿಗಳು ತ್ರಿಪುರಾಗೆ ಹೆಚ್ಚುವರಿ ಕೇಂದ್ರ ಸಶಸ್ತ್ರ ಪಡೆಯನ್ನು ತಕ್ಷಣವೇ ನಿಯೋಜಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ತ್ರಿಪುರಾಗೆ ಹೆಚ್ಚುವರಿ ಕೇಂದ್ರ ಸಶಸ್ತ್ರ ಪಡೆಯನ್ನು ತಕ್ಷಣವೇ ನಿಯೋಜಿಸುವಂತೆ ಸುಪ್ರೀಂ ಕೋರ್ಟ್ ಆದೇಶ


ಬಿಜೆಪಿಯ ಬೆದರಿಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿರೋಧ ಪಕ್ಷಗಳು

ಹೊಸದಿಲ್ಲಿ: ತ್ರಿಪುರಾದಲ್ಲಿ ಎರಡು ಹೆಚ್ಚುವರಿ CAPF (ಕೇಂದ್ರ ಸಶಸ್ತ್ರ ಪೊಲೀಸ್ ಪಡೆ) ನಿಯೋಜನೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ತ್ರಿಪುರಾದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮತದಾರರನ್ನು ಬೆದರಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು.

ಚುನಾವಣೆಯಲ್ಲಿ ಮತ ಚಲಾಯಿಸದಂತೆ ಬಿಜೆಪಿ ಕಾರ್ಯಕರ್ತರು ಬೆದರಿಕೆ ಹಾಕುತ್ತಿದ್ದಾರೆ ಎಂದು ವಿರೋಧ ಪಕ್ಷವಾದ ಸಿಪಿಐ(ಎಂ) ತನ್ನ ಅರ್ಜಿಯಲ್ಲಿ ಹೇಳಿದೆ.

ತೃಣಮೂಲ ಕಾಂಗ್ರೆಸ್ ಕೂಡ ಬಿಜೆಪಿ ವಿರುದ್ಧ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಬಿಜೆಪಿಗರು ತಮ್ಮ ಕಾರ್ಯಕರ್ತರನ್ನು ಮತಗಟ್ಟೆಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

Join Whatsapp
Exit mobile version