Home ಟಾಪ್ ಸುದ್ದಿಗಳು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಬಿಜೆಪಿ ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನ

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಬಿಜೆಪಿ ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನ

ಹುಬ್ಬಳ್ಳಿ: ಜಿಲ್ಲಾ ಸಚಿವರನ್ನು ಬದಲಾಯಿಸಿ ತವರು ಜಿಲ್ಲೆಯನ್ನು ಹೊರತುಪಡಿಸಿ ಬೇರೆ ಜಿಲ್ಲೆ ನೀಡಿದ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಹಿರಿಯ ಮುಖಂಡ, ಶಾಸಕ ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿದರೆ ಹೆಚ್ಚು ಅನುಕೂಲ. ಇದರಿಂದ ಆಡಳಿತ ಮತ್ತು ಅಭಿವೃದ್ಧಿ ಚುರುಕುಪಡೆದುಕೊಳ್ಳಲು ಸಹಾಯಕವಾಗುತ್ತದೆ ಎಂದು ಹೇಳಿದ್ದಾರೆ.

ಪಕ್ಷ ಸಂಘಟನೆ ಸಲುವಾಗಿ ಮುಖ್ಯಮಂತ್ರಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಆದರೆ, ಇದರಿಂದ ಪಕ್ಷಕ್ಕೆ ಸ್ವಲ್ಪ ಹಿನ್ನಡೆಯಾಗುತ್ತದೆ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಇದು ಮುಂಬರುವ ಚುನಾವಣೆ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದರು.

Join Whatsapp
Exit mobile version