ಹಿರಿಯ ಬಿಜೆಪಿ ಶಾಸಕ ಸಿಎಂ ಉದಾಸಿ ಇನ್ನಿಲ್ಲ

Prasthutha|

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಅವರು ನಿಧನರಾಗಿದ್ದಾರೆ.

ವಯೋ ಸಹಜ ಖಾಯಿಲೆಯಿಂದ ಬಳತ್ತಿದ್ದ 81 ವರ್ಷದ ಉದಾಸಿ, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೊನೆಯುಸಿರೆಳೆದಿದ್ದಾರೆ.  

- Advertisement -

ಮೊತ್ತ ಮೊದಲ ಬಾರಿಗೆ ಅವರು 1983 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ವಿಧಾನಸಭೆಗೆ ಪ್ರವೇಶ ಪಡೆದಿದ್ದರು. ಈ ಹಿಂದೆ ಯಡಿಯೂರಪ್ಪ ರವರ ಸರ್ಕಾರದಲ್ಲಿ ಸಚಿವರಾಗಿದ್ದ ಉದಾಸಿ ಆರು ಬಾರಿ ಹಾನಗಲ್ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

- Advertisement -