Home ಟಾಪ್ ಸುದ್ದಿಗಳು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ನಿಧನ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ನಿಧನ

ಭೋಪಾಲ್: ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಅಜೀಜ್ ಖುರೇಷಿ (83) ನಿಧನರಾಗಿದ್ದಾರೆ.


ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು ಎಂದು ಸೋದರಳಿಯ ಸುಫಿಯಾನ್ ಆಲಿ ತಿಳಿಸಿದ್ದಾರೆ.
ಖುರೇಷಿ ಅವರು ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.


1972 ರಲ್ಲಿ ಮಧ್ಯಪ್ರದೇಶದ ಸೆಹೋರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ 1984ರಲ್ಲಿ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಇಂದು ಸಂಜೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಸುಫಿಯಾನ್ ಮಾಹಿತಿ ನೀಡಿದ್ದಾರೆ.

Join Whatsapp
Exit mobile version