ಕಾಂಗ್ರೆಸ್’ನ ಹಿರಿಯ ನಾಯಕ, ಮಾಜಿ ಸಚಿವ ಡಿ.ಬಿ ಇನಾಮದಾರ್ ನಿಧನ

Prasthutha|

ಬೆಳಗಾವಿ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿಬಿ ಇನಾಮದಾರ್ ಅವರು ಇಂದು(ಮಂಗಳವಾರ) ನಿಧನರಾಗಿದ್ದಾರೆ.

- Advertisement -


ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಇನಾಮದಾರ್ ಅವರು ಕಳೆದೊಂದು ತಿಂಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.


ಇನಾಮದಾರ್ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಮದಾರ್ 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು, ಎಸ್.ಎಂ ಕೃಷ್ಣ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು.

Join Whatsapp