ಮುಂಬೈ: ಮಹಾರಾಷ್ಟ್ರದ ಕಾಂಗ್ರೆಸ್’ನ ಹಿರಿಯ ನಾಯಕ ಬಾಳಾಸಾಹೇಬ್ ಥೋರಟ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಾಸಿಕ್ ವಿಧಾನ ಪರಿಷತ್ ಚುನಾವಣೆಯ ಬಳಿಕ ಪಕ್ಷದ ರಾಜ್ಯಾಧ್ಯಕ್ಷ ನಾನಾ ಪಠೋಲೆ ಅವರೊಂದಿಗೆ ಉಂಟಾದ ಭಿನ್ನಮತದ ಬಳಿಕ ಥೋರಟ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ನಾನಾ ಪಠೋಲೆ ಅವರೊಂದಿಗೆ ಸೇರಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಥೋರಟ್ ತಮ್ಮ ರಾಜೀನಾಮೆಗೆ ಕಾರಣ ನೀಡಿದ್ದಾರೆ.
ಥೋರತ್ ಅವರು ಫೆಬ್ರವರಿ 2 ರಂದು ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ, ನಾನಾ ಪಠೋಲೆ ಅವರೊಂದಿಗೆ ಕೆಲಸ ಮಾಡುವುದು ಕಷ್ಟವಾಗುತ್ತಿದೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಹಿರಿಯ ನಾಯಕರಾಗಿದ್ದರೂ, ತಮ್ಮ ಮತ್ತು ಕುಟುಂಬದ ವಿರುದ್ಧ ಹೇಳಿಕೆಗಳನ್ನು ನೀಡಲಾಗುತ್ತಿದೆ. ಕೆಲವರು ತಮ್ಮ ಮತ್ತು ಕುಟುಂಬದ ವರ್ಚಸ್ಸಿಗೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆಪ್ತರೊಂದಿಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.