ಕಾಂಗ್ರೆಸ್ ನ ಹಿರಿಯ ನಾಯಕ ಪದ್ಮಾಕರ್ ವಾಲ್ವಿ ಬಿಜೆಪಿಗೆ ಸೇರ್ಪಡೆ

Prasthutha|

ಮಹಾರಾಷ್ಟ್ರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಪದ್ಮಾಕರ್ ವಾಲ್ವಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

- Advertisement -


ನಂದೂರ್ ಬಾರ್ ನ ಶಾಹದಾ ಕ್ಷೇತ್ರದ ಮಾಜಿ ಶಾಸಕ ವಾಲ್ವಿ ಅವರು ಮುಂಬೈನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬಾವಾಂಕುಲೆ ಮತ್ತು ಪಕ್ಷದ ಮುಖಂಡ ಅಶೋಕ್ ಚವ್ಹಾಣ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಪದ್ಮಾಕರ್ ವಾಲ್ವಿ ಬಿಜೆಪಿ ಸೇರುವ ಮೂಲಕ ನಂದೂರಬಾರ್ ನಲ್ಲಿ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ. 2009 ರಲ್ಲಿ, ಅವರು ಶಾಹದಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. ಆದರೆ 2014ರಲ್ಲಿ ಸೋಲು ಕಂಡಿದ್ದರು.



Join Whatsapp