CPM ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆರೋಗ್ಯ ಗಂಭೀರ..!

Prasthutha|

ನವದೆಹಲಿ: ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಆರೋಗ್ಯ ಗಂಭೀರವಾಗಿದ್ದು, ಕೃತಕ ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಸಿಪಿಐ ತಿಳಿಸಿದೆ.

- Advertisement -


72 ವರ್ಷದ ಯೆಚೂರಿ ಅವರನ್ನು ಆಗಸ್ಟ್ 19 ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಏಮ್ಸ್ಗೆ ದಾಖಲಿಸಲಾಗಿತ್ತು. ಅವರು ವೆಂಟಿಲೇಟರ್ ನಲ್ಲಿದ್ದು, ವೈದ್ಯರ ತಂಡ ನಿಗಾ ವಹಿಸಿದೆ. ಈ ಸಮಯದಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು CPI ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.


ಸೀತಾರಾಂ ಯೆಚೂರಿ ಅವರ ಕಾಯಿಯಿಲೆಯ ಸ್ವರೂಪವನ್ನು ಆಸ್ಪತ್ರೆ ಬಹಿರಂಗಪಡಿಸಿಲ್ಲ. ಯೆಚೂರಿ ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.



Join Whatsapp