ಎರಡೂವರೆ ವರ್ಷದ ಬಳಿಕ ಹಿರಿಯ ಸಚಿವರು ಬೇರೆಯವರಿಗೆ ಅವಕಾಶ ನೀಡಬೇಕು: ಕೆ.ಹೆಚ್.ಮುನಿಯಪ್ಪ

Prasthutha|

ಬೆಂಗಳೂರು: ಮುಂದಿನ ಎರಡೂವರೆ ವರ್ಷದ ಬಳಿಕ ಸಂಪುಟದ ಹಿರಿಯ ಸಚಿವರು ಬೇರೆಯವರಿಗೆ ಅವಕಾಶ ನೀಡುವುದು ಒಳ್ಳೆಯದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.

- Advertisement -


ಭಾರತ್ ಜೋಡೋ ಸಭಾಂಗಣದಲ್ಲಿ ಇಂದು ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಸಿಎಂ, ಡಿಸಿಎಂ ಆಯ್ಕೆ ಮಾಡುವುದು ಹೈಕಮಾಂಡ್ ನಿರ್ಧಾರ. ಆದರೆ ಕೆಲವು ಹಿರಿಯರು ಸಚಿವ ಸ್ಥಾನವನ್ನು ಬಿಟ್ಟುಕೊಡುವುದು ಉತ್ತಮ ಎಂದರು.


ಡಿಸಿಸಿ ಅಧ್ಯಕ್ಷರನ್ನು ನಿಗಮ, ಮಂಡಳಿಗಳಿಗೆ ನೇಮಕ ಮಾಡಿ. ಆ ಮೂಲಕ ಇಡೀ ದೇಶಕ್ಕೆ ಮಾದರಿಯಾಗಬೇಕು ಎಂದು ಮನವಿ ಮಾಡಿದರು. ಕಾರ್ಯಕರ್ತರು ಚಪ್ಪಾಳೆ ತಟ್ಟಿ ಸಚಿವರ ಹೇಳಿಕೆಯನ್ನು ಸ್ವಾಗತಿಸಿದರು.



Join Whatsapp