Home ಟಾಪ್ ಸುದ್ದಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ಕಿರು ಸಮಾವೇಶ

ಹಿರಿಯ ಪೊಲೀಸ್ ಅಧಿಕಾರಿಗಳ ಕಿರು ಸಮಾವೇಶ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಕಿರು ಸಮಾವೇಶ ಜರುಗಿತು.


ಇದೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಕಾಫಿ ಟೇಬಲ್ ಬುಕ್ , ಸೇವೆಯಲ್ಲಿದ್ದಾಗ ಮರಣ ಹೊಂದಿದ ಇಲಾಖೆಯ ನೌಕರರಿಗೆ ಒದಗಿಸಿರುವ ಪರಿಹಾರದ ಕುರಿತ ಕಿರು ಪುಸ್ತಕವನ್ನು ಬಿಡುಗಡೆ ಮಾಡಿದರು ಹಾಗೂ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಮುಖ ಗುರುತಿಸುವ ವ್ಯವಸ್ಥೆಗೆ (ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್) ಚಾಲನೆ ನೀಡಿದರು.


ಗೃಹ ಸಚಿವ ಆರಗ ಜ್ಞಾನೇಂದ್ರ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್, ಸೂದ್ ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp
Exit mobile version