ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ವಿದ್ವಾಂಸ ಪುರುಷೋತ್ತಮ ಬಿಳಿಮಲೆ ನೇಮಕ

Prasthutha|

ಬೆಂಗಳೂರು: ರಾಜ್ಯ ಸರಕಾರವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ವಿದ್ವಾಂಸ ಡಾ.ಪುರುಷೋತ್ತಮ ಬಿಳಿಮಲೆ ಅವರು ನೇಮಕಗೊಂಡಿದ್ದಾರೆ.

- Advertisement -

ಪ್ರಾಧ್ಯಾಪಕರಾಗಿ, ಲೇಖಕರಾಗಿ, ಜಾನಪದ ಕಲೆ, ಯಕ್ಷಗಾನ ಮತ್ತು ಸಾಂಸ್ಕೃತಿಕ ಅಧ್ಯಯನ ಕ್ಷೇತ್ರಗಳಲ್ಲಿ ಖ್ಯಾತಿ ಗಳಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಪುರುಷೋತ್ತಮ ಬಿಳಿಮಲೆ ಅವರು ಕನ್ನಡ ನಾಡಿನ ಹಿರಿಯ ವಿದ್ವಾಂಸರು. ಉಪನ್ಯಾಸಕರಾಗಿ, ಹಂಪಿ ಕನ್ನಡ ವಿವಿಯಲ್ಲಿ ಪ್ರಾಧ್ಯಾಪಕರಾಗಿ, ವಿವಿಯ ಜಾನಪದ ವಿಭಾಗದ ಮುಖ್ಯಸ್ಥರಾಗಿ, ದೆಹಲಿಯ ಅಮೆರಿಕನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಸ್ಟಡೀಸ್‌ನ ಸಂಶೋಧನಾ ಕೇಂದ್ರದ ನಿರ್ದೇಶಕರಾಗಿ, ದೆಹಲಿಯ ಜೆಎನ್ ಯು ವಿಶ್ವವಿದ್ಯಾಲಯದ ಅಧ್ಯಯನ ಪೀಠದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಇವರು ಈ ಹಿಂದೆ ಕರ್ನಾಟಕ ಜಾನಪದ ಅಕಾಡಮಿಯ ಸದಸ್ಯರಾಗಿ, ರಾಜ್ಯ ವಯಸ್ಕರ ಶಿಕ್ಷಣ ಸಮಿತಿ ಸದಸ್ಯರಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. ಪಿಎಚ್.ಡಿ, ಎಂ.ಫಿಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿರುತ್ತಾರೆ.

ಇದೀಗ ಕರ್ನಾಟಕ ಸರ್ಕಾರವು ಪುರುಷೋತ್ತಮ ಬಿಳಿಮಲೆಯವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಅಧ್ಯಕ್ಷರ ಜೊತೆ ಏಳು ಮಂದಿ ಸದಸ್ಯರನ್ನೂ ನೇಮಿಸಿ ಪ್ರಾಧಿಕಾರ ಚಲನೆ ನೀಡಿದೆ.

- Advertisement -

ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ನೇಮಿಸಿ ಆದೇಶಿಸಿದೆ.

1.ಡಾ.ಪುರುಷೋತ್ತಮ ಬಿಳಿಮಲೆ – ಅಧ್ಯಕ್ಷರು

2.ಪ್ರೊ.ರಾಮಚಂದ್ರಪ್ಪ- ಸದಸ್ಯರು

3.ಡಾ.ವಿ.ಪಿ.ನಿರಂಜನಾರಾಧ್ಯ- ಸದಸ್ಯರು

4. ಟಿ.ಗುರುರಾಜ್- ಸದಸ್ಯರು

5.ಡಾ. ರವಿಕುಮಾರ್ ನೀಹ- ಸದಸ್ಯರು

6.ದಾಕ್ಷಾಯಿಣಿ ಹುಡೇದ- ಸದಸ್ಯರು

7. ಯಾಕೂಬ್ ಖಾದರ್- ಸದಸ್ಯರು

8. ವಿರೂಪಣ್ಣ ಕಲ್ಲೂರು- ಸದಸ್ಯರು

Join Whatsapp