Home ಟಾಪ್ ಸುದ್ದಿಗಳು ಉ.ಪ್ರ. ಚುನಾವಣೆ: ಬಿಜೆಪಿ ಅಭ್ಯರ್ಥಿ ಪತಿಯ ಪರ ಐ.ಜಿ ಮತಯಾಚನೆ!

ಉ.ಪ್ರ. ಚುನಾವಣೆ: ಬಿಜೆಪಿ ಅಭ್ಯರ್ಥಿ ಪತಿಯ ಪರ ಐ.ಜಿ ಮತಯಾಚನೆ!

ಲಖ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ವೇಳೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಬಿಜೆಪಿ ಅಭ್ಯರ್ಥಿಯಾದ ತಮ್ಮ ಪತಿಗೆ ಮತ ಹಾಕುವಂತೆ ಜನರನ್ನು ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಸಮಾಜವಾದಿ ಪಕ್ಷ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಐಜಿ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿದೆ. ಲಖ್ನೋ ರೇಂಜ್ ಐಜಿ ಲಕ್ಷ್ಮಿ ಸಿಂಗ್ ಅವರು ತನ್ನ ಪತಿ ಸರೋಜಿನಿ ನಗರದ ಬಿಜೆಪಿ ಅಭ್ಯರ್ಥಿ ರಾಜೇಶ್ವರ್ ಸಿಂಗ್ ಅವರಿಗೆ ಮತ ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ED ಜಂಟಿ ನಿರ್ದೇಶಕರಾಗಿದ್ದ ರಾಜೇಶ್ವರ್ ಸಿಂಗ್ ಅವರ ಸ್ವಯಂ ನಿವೃತ್ತಿಯ ಅರ್ಜಿಯನ್ನು ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಿದ್ದು, ಇದೀಗ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಏಳು ಹಂತದ ಉತ್ತರಪ್ರದೇಶ ಚುನಾವಣೆಯ ಮೊದಲ ಎರಡು ಹಂತಗಳು ಪೂರ್ಣಗೊಂಡಿವೆ. ಮೂರನೇ ಹಂತ ಫೆಬ್ರವರಿ 20 ರಂದು ನಡೆಯಲಿದ್ದು, ಮಾರ್ಚ್ 10 ರಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Join Whatsapp
Exit mobile version