ಹಿರಿಯ ಸಾಹಿತಿ ಪ್ರೊ.ವಸಂತ ಕುಷ್ಟಗಿ ಇನ್ನಿಲ್ಲ

Prasthutha|

ಕಲಬುರ್ಗಿ : ಹಿರಿಯ ಸಾಹಿತಿ, ಚಿಂತಕ ಪ್ರೊ.ವಸಂತ ಕುಷ್ಟಗಿ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಲೋ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ಹಿರಿಯ ಸಾಹಿತಿ ಪ್ರೊ.ವಸಂತ ಕುಷ್ಟಗಿ ಅವರು ಗುಲ್ಪರ್ಗಾದ ಹಾರ್ಟ್ ಫೌಂಡೇಷನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

- Advertisement -

ಕನ್ನಡ ಸಾಹಿತ್ಯ ಲೋಕಕ್ಕೆ 60ಕ್ಕೂ ಹೆಚ್ಚು ಕೃತಿಗಳನ್ನು ಕೊಡುಗೆಯಾಗಿ ನೀಡಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ.ವಸಂತ ಕುಷ್ಟಗಿ ಅವರು, ಪ್ರಾಧ್ಯಾಪಕರಾಗಿ, ಸಾಹಿತಿ, ಲೇಖಕ, ಪತ್ರಕರ್ತ, ವಿದ್ವಾಂಸ, ಭಾಷಾ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದ್ದಾರೆ.

- Advertisement -