ಸೆ. 18ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ

Prasthutha|

ನವದೆಹಲಿ: ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.

- Advertisement -


ಈ ಅಧಿವೇಶನದಲ್ಲಿ 5 ಕಲಾಪಗಳು ನಡೆಯಲಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವಿಟರ್’ನಲ್ಲಿ ಪೋಸ್ಟ್ ಮಾಡಿದ್ದಾರೆ.


ಅಮೃತ್ ಕಾಲ್ ನಡುವೆ, ಸಂಸತ್ತಿನಲ್ಲಿ ಫಲಪ್ರದ ಚರ್ಚೆಯನ್ನು ನಡೆಸಲು ಎದುರು ನೋಡುತ್ತಿದ್ದೇನೆ ಎಂದು ಜೋಶಿ ಪೋಸ್ಟ್ ಮಾಡಿದ್ದಾರೆ.