ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚನೆ: ಜಿ. ಪರಮೇಶ್ವರ್

Prasthutha|

ಬೆಂಗಳೂರು: ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚಿಸಲಾಗುವುದು. ಗೂಗಲ್, ಫೇಸ್ ಬುಕ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಸಭೆ ಕರೆಯಲಾಗುತ್ತಿದೆ. ಫೇಕ್ ಸುದ್ದಿ ಹರಿಬಿಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಮೊದಲು ಕಡಿವಾಣ ಹಾಕಲಾಗುವುದು ಎಂದರು.


ಯಾರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡುತ್ತಾರೋ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಯಾವುದೇ ಪಕ್ಷ, ಸಂಘಟನೆ ಇರಲಿ ಕ್ರಮ ನಿಶ್ಚಿತ. ಈಗಿರುವ ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚಿಸಲಾಗುವುದು. ಫೇಕ್ ಸುದ್ದಿ ಹರಿಬಿಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಮೊದಲು ಕಡಿವಾಣ ಹಾಕಲಾಗುವುದು. ಯಾರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡುತ್ತಾರೆ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಖಡಖ್ ಸೂಚನೆ ನೀಡಿದರು.