ಕೊರೋನಾ ಭೀತಿ; ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ: ಸಚಿವ ಮಧು ಬಂಗಾರಪ್ಪ

Prasthutha|

ಬೆಂಗಳೂರು: ಕೊರೋನಾ ಒಮಿಕ್ರಾನ್ ರೂಪಾಂತರಿ ತಳಿ JN.1 ಭೀತಿ ಶುರುವಾಗಿದೆ. ಆರೋಗ್ಯ ಇಲಾಖೆ ಸಲಹೆ ಮೇರೆಗೆ ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆರೋಗ್ಯ ಇಲಾಖೆ ಮಾರ್ಗಸೂಚಿ ಪರಿಗಣಿಸುತ್ತೇವೆ. ಏನೆಲ್ಲಾ ಕ್ರಮ ವಹಿಸಬೇಕು ಎಂದು ನಿರ್ಧಾರ ಮಾಡುತ್ತಿದ್ದೇವೆ. ಕೊವಿಡ್ ಏರಿಕೆ ಅನಿಸುತ್ತಿದೆ. ಈಗ ಸಿಎಂ ಸಿದ್ದರಾಮಯ್ಯ ಜೊತೆ ಕೂಡ ಈ ಬಗ್ಗೆ ಚರ್ಚೆಯಾಗಿದೆ. ಹೀಗಾಗಿ ಮಾಸ್ಕ್ ಟೆಸ್ಟಿಂಗ್ ಎಲ್ಲದರ ಬಗ್ಗೆ ನಿರ್ಧಾರ ಮಾಡುತ್ತಿದ್ದಾರೆ ಎಂದಿದ್ದಾರೆ.



Join Whatsapp