ಬೆಂಗಳೂರು: ಕೊರೋನಾ ಒಮಿಕ್ರಾನ್ ರೂಪಾಂತರಿ ತಳಿ JN.1 ಭೀತಿ ಶುರುವಾಗಿದೆ. ಆರೋಗ್ಯ ಇಲಾಖೆ ಸಲಹೆ ಮೇರೆಗೆ ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆರೋಗ್ಯ ಇಲಾಖೆ ಮಾರ್ಗಸೂಚಿ ಪರಿಗಣಿಸುತ್ತೇವೆ. ಏನೆಲ್ಲಾ ಕ್ರಮ ವಹಿಸಬೇಕು ಎಂದು ನಿರ್ಧಾರ ಮಾಡುತ್ತಿದ್ದೇವೆ. ಕೊವಿಡ್ ಏರಿಕೆ ಅನಿಸುತ್ತಿದೆ. ಈಗ ಸಿಎಂ ಸಿದ್ದರಾಮಯ್ಯ ಜೊತೆ ಕೂಡ ಈ ಬಗ್ಗೆ ಚರ್ಚೆಯಾಗಿದೆ. ಹೀಗಾಗಿ ಮಾಸ್ಕ್ ಟೆಸ್ಟಿಂಗ್ ಎಲ್ಲದರ ಬಗ್ಗೆ ನಿರ್ಧಾರ ಮಾಡುತ್ತಿದ್ದಾರೆ ಎಂದಿದ್ದಾರೆ.