ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಬೈಕ್ ಹಾಗೂ ಮೂರು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಕ್ಕೇರಿಯ ರಕ್ಷಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಬೈಲಹೊಂಗಲದ ಭಾರತಿ ಪೂಜೇರಿ (28), ವೇದಾಂತ ಪೂಜೇರಿ (6) ಎಂದು ಗುರುತಿಸಲಾಗಿದೆ. ಅನಿಲ ಪೂಜೇರಿ ಹಾಗೂ ಗೋಕಾಕ್ ತಾಲೂಕಿನ ಕಿರಣ ಸಾಲಿಮಠ (28) ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೈಕ್ ನಲ್ಲಿಸಂಚರಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ಹಾನಿಗೊಳಗಾಗಿದ್ದು, ರಸ್ತೆಗೆಸೆಯಲ್ಪಟ್ಟು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.