ಸರಣಿ ಅಪಘಾತ: ಮೂರು ಕಾರುಗಳು ಜಖಂ

Prasthutha|

ನೆಲಮಂಗಲ: ಅತಿವೇಗದ ಚಾಲನೆಯಿಂದ ನಿಯಂತ್ರಣ ಕಳೆದುಕೊಂಡು ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆಯ ಮತ್ತೊಂದು ಬದಿಯಲ್ಲಿ ಬಿದ್ದು ಸರಣಿ ಅಪಘಾತ ಸಂಭವಿಸಿದ ಘಟನೆ ನೆಲಮಂಗಲ ತಾಲೂಕಿನ ಕೆಂಗಲ್ ಕೆಂಪೋಹಳ್ಳಿ ಬಳಿ ನಡೆದಿದೆ.


ಈ ಅಪಘಾತದಲ್ಲಿ ಮೂರು ಕಾರುಗಳು ಜಖಂಗೊಂಡಿವೆ.

- Advertisement -


ತುಮಕೂರಿನಿಂದ ಬರುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆಯ ಮತ್ತೊಂದು ಬದಿಗೆ ಹಾರಿದೆ. ಈ ವೇಳೆ ಎದುರಿಗೆ ಬರುತ್ತಿದ್ದ ಎಕ್ಸ್ ಯುವಿ ಹಾಗೂ ಐ 10 ಕಾರಿಗೆ ಡಿಕ್ಕಿ ಹೊಡೆದಿದೆ.


ಘಟನೆಯಲ್ಲಿ ಮೂರು ಕಾರು ಜಖಂಗೊಂಡಿವೆ, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -