Home ಟಾಪ್ ಸುದ್ದಿಗಳು ಗ್ರಾಮ ಪಂಚಾಯತ್ ಸಿಬ್ಬಂದಿಗೆ ಸೇವಾ ಭದ್ರತೆ: ಪ್ರಿಯಾಂಕ್ ಖರ್ಗೆ

ಗ್ರಾಮ ಪಂಚಾಯತ್ ಸಿಬ್ಬಂದಿಗೆ ಸೇವಾ ಭದ್ರತೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ 11,170 ಸಿಬ್ಬಂದಿಗೆ ಸೇವಾ ಭದ್ರತೆ ನೀಡುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಈ ಬಗ್ಗೆ ಎಕ್ಸ್ (ಟ್ವಿಟ್ಟರ್) ನಲ್ಲಿ ಹಂಚಿಕೊಂಡಿರುವ ಖರ್ಗೆ, 2017ಕ್ಕೂ ಮುನ್ನ ಗ್ರಾಮ ಪಂಚಾಯತಿಗಳಲ್ಲಿ ನೇಮಕಗೊಂಡಿರುವ ನೀರಗಂಟಿ, ಸ್ವಚ್ಛತಗಾರರ ಹುದ್ದೆಗಳಿಗೆ ಎದುರಾಗಿದ್ದ ಕನಿಷ್ಠ ವಿದ್ಯಾರ್ಹತೆಯ ತೊಡಕುಗಳನ್ನು ನಿವಾರಿಸಿ ವೇತನ ಪಾವತಿಗೆ ಸರ್ಕಾರ ಮುಂದಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸೇವಾ ಭದ್ರತೆ ನೀಡುವುದರಿಂದ ಕನಿಷ್ಠ ವೇತನ, ರಜೆ ಸೌಲಭ್ಯ, ವೈದ್ಯಕೀಯ ಸೌಲಭ್ಯ, ಸೇವಾ ಭದ್ರತೆ, ಅನುಕಂಪದ ಮೇಲೆ ಕುಟುಂಬಸ್ಥರ ನೇಮಕ, ಪಿಂಚಣಿ ಸೌಲಭ್ಯ, ಸಕಾಲದಲ್ಲಿ ವೇತನ ಸೇರಿದಂತೆ ವಿವಿಧ ಸೌಲಭ್ಯಗಳು ಇನ್ಮುಂದೆ ಗ್ರಾಮ ಪಂಚಾಯತ್ ಸಿಬ್ಬಂದಿಗೆ ದೊರೆಯಲಿವೆ ಎಂದರು.


ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಸಬಲಗೊಳಿಸುವ ಹಾಗೂ ಹೆಚ್ಚು ಉತ್ತರದಾಯಿಯಾಗಿಸುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೇವೆಗಳನ್ನು ಸರಾಗವಾಗಿ ಒದಗಿಸುವ ನಿಟ್ಟಿನಲ್ಲಿ ಈ ಕ್ರಾಂತಿಕಾರಿ ಹೆಜ್ಜೆಯನ್ನು ಇಡಲಾಗಿದೆ ಎಂದು ಹೇಳಿದ್ದಾರೆ.

Join Whatsapp
Exit mobile version