Home ಟಾಪ್ ಸುದ್ದಿಗಳು ಝಮೀರ್ ನೇತೃತ್ವದಲ್ಲಿ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ: ವಿಜಯೇಂದ್ರ

ಝಮೀರ್ ನೇತೃತ್ವದಲ್ಲಿ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ: ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಲತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಆಸ್ತಿ ಎಂದು ಘೋಷಿಸಿದರೆ ರೈತರು ಬೀದಿಗೆ ಬಂದು ಏನು ಮಾಡಬೇಕು ಎಂದು ಪ್ರಶ್ನಿಸಿದರು.


ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ. ರೈತರಿಗೆ ಧ್ವನಿಗೂಡಿಸುತ್ತೇವೆ. ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ನಮ್ಮ ಮೇಲೆ ಆರೋಪ ಮಾಡುತ್ತಾರೆ ಎಂದು ಟೀಕಿಸಿದರು.


ಈ ರೀತಿ ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ, ಈ ದೇಶವನ್ನು ಜಾತಿ, ಧರ್ಮದ ಆಧಾರದಲ್ಲಿ ವಿಭಜಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಮಾಡುತ್ತಾ ಬರುತ್ತಿದೆ. ಅದೇ ನಿಟ್ಟಿನಲ್ಲಿ ಝಮೀರ್ ಅಹ್ಮದ್ ನೇತೃತ್ವದಲ್ಲಿ ಇವತ್ತು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ ಎಂದು ಆರೋಪಿಸಿದರು.

Join Whatsapp
Exit mobile version