ಕಾಂಗ್ರೆಸ್ ಪುನರುಜ್ಜೀವನಕ್ಕೆ ಉನ್ನತಾಧಿಕಾರ ಸಮಿತಿ ಅಸ್ತಿತ್ವಕ್ಕೆ

Prasthutha|

ಹೊಸದಿಲ್ಲಿ:  ಮುಂದಿನ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಉನ್ನತಾಧಿಕಾರ ಸಮಿತಿಯನ್ನು ರಚಿಸಲು ಕಾಂಗ್ರೆಸ್ ಸಜ್ಜಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರ ಶಿಫಾರಸಿನ ಮೇರೆಗೆ ಉನ್ನತ ಮಟ್ಟದ ಕಾರ್ಯಪಡೆಯನ್ನು ರಚಿಸಲಾಗುವುದು. ಸಾಂಸ್ಥಿಕ ವಿಷಯಗಳು ಮತ್ತು ಭವಿಷ್ಯದ ರಾಜಕೀಯ ನಡೆಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರೆದಿರುವ ಚಿಂತನ್ ಶಿಬಿರ್ ಮುಂದಿನ ತಿಂಗಳು ರಾಜಸ್ಥಾನದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪುನರುಜ್ಜೀವನಕ್ಕಾಗಿ ಪ್ರಶಾಂತ್ ಕಿಶೋರ್ ಅವರು ಸಲ್ಲಿಸಿದ ಯೋಜನೆಯನ್ನು ಅಧ್ಯಯನ ಮಾಡಿದ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ್ದು, ಉನ್ನತ ಮಟ್ಟದ ಸಭೆ ವರದಿಯ ಬಗ್ಗೆ ವಿಸ್ತೃತ ಚರ್ಚೆ ನಡೆಸಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ್ ಹೇಳಿದ್ದಾರೆ.

- Advertisement -

ಚಿಂತನ್ ಶಿಬಿರ್ ನಲ್ಲಿ ಚರ್ಚಿಸಬೇಕಾದ ವಿವಿಧ ವಿಷಯಗಳನ್ನು ಕ್ರೋಡೀಕರಿಸಲು ಸೋನಿಯಾ ಗಾಂಧಿ ವಿವಿಧ ಸಮಿತಿಗಳನ್ನು ರಚಿಸಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು, ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳು, ರಾಜ್ಯ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರು ಸೇರಿದಂತೆ ದೇಶಾದ್ಯಂತದ ಸುಮಾರು 400 ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Join Whatsapp