ಬೆಂಗಳೂರು: ರಾಜ್ಯದ 10 ಕಡೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆಯ ವಿಷಯ ಸರ್ಕಾರದ ಮಟ್ಟದಲ್ಲಿ ಚರ್ಚೆಯೇ ಆಗಿಲ್ಲ, ಇದು ಸರ್ಕಾರದ ನಿಲುವು ಅಲ್ಲ, ವಕ್ಫ್ ಬೋರ್ಡ್ ಅಧ್ಯಕ್ಷರು ಹೇಳಿರುವುದು, ಅದು ಅವರ ವೈಯಕ್ತಿಕ ಹೇಳಿಕೆಯಷ್ಟೇ ಎಂದು ಸಿಎಂ ಬೊಮ್ಮಾಯಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ರಾಜ್ಯದ 10 ಕಡೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆಯ ಕುರಿತು ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಈವರೆಗೆ ಸರಕಾರ ಯಾವುದೇ ತೀರ್ಮಾನ ಕೈಗೊಳ್ಳಲಿಲ್ಲ, ವಕ್ಫ್ ಬೋರ್ಡ್ ಅಧ್ಯಕ್ಷರು ಹೇಳಿರುವುದು ಅವರ ವೈಯಕ್ತಿಕ ಹೇಳಿಕೆ ಅಷ್ಟೇ. ಸರ್ಕಾರ ಏನು ನಿರ್ಣಯ ತೆಗೆಯುವುದಾದರೂ ಮರುಪರಿಶೀಲಿಸಿ ನಿರ್ಧರಿಸುತ್ತದೆ ಎಂಬ ಹೇಳಿಕೆ ನೀಡಿದ್ದಾರೆ.
ಪ್ರತ್ಯೇಕ ಮುಸ್ಲಿಂ ಹೆಣ್ಣು ಮಕ್ಕಳ ಕಾಲೇಜು ಸ್ಥಾಪನೆಯ ಬಗ್ಗೆ ವಿವಾದವೆದ್ದ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ನಿರ್ಧಾರದಿಂದ ಹಿಂದೆ ಸರಿಬಹುದೇ ಎಂಬ ಸಂಶಯ ಸಿಎಂ ಹೇಳಿಕೆಯಿಂದ ಮೂಡುತ್ತದೆ.