ಅಸ್ಸಾಂ: ಅಸ್ಸಾಂ ಮತ್ತು ದೇಶದ ಇತರೆಡೆಗಳಲ್ಲಿ “ಆಕ್ಷೇಪಾರ್ಹ ಚಟುವಟಿಕೆಗಳಲ್ಲಿ” ತೊಡಗಿಸಿಕೊಂಡಿದ್ದಕ್ಕಾಗಿ ಬಾಂಗ್ಲಾದೇಶದ ಆರು ಧಾರ್ಮಿಕ ನಾಯಕರು ಮತ್ತು ಗಾಯಕ ಓರ್ವರನ್ನು ಭಾರತದಲ್ಲಿ ಕಪ್ಪುಪಟ್ಟಿಗೆ ಸೇರಿಸಲಾಗಿದೆ.
ಗುಪ್ತಚರ ವರದಿಗಳನ್ನು ಉಲ್ಲೇಖಿಸಿ ಅಸ್ಸಾಂ ಸರ್ಕಾರವು ಕೇಂದ್ರದೊಂದಿಗೆ ಮಾತುಕತೆ ನಡೆಸಿದ ನಂತರ ಅವರ ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಂಗ್ಲಾ ಧಾರ್ಮಿಕ ಮುಖಂಡರು ಹಲವಾರು ಬಾರಿ ಅಸ್ಸಾಂಗೆ ಭೇಟಿ ನೀಡಿದ್ದರು, ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸಿದ್ದರು ಮತ್ತು ಹಾನಿಕಾರಕ ವಿಷಯಗಳನ್ನು ಬೋಧಿಸುವಲ್ಲಿ ತೊಡಗಿಸಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಸಿ ವೀಸಾದೊಂದಿಗೆ ಬರುವ ವ್ಯಕ್ತಿಯು ಧಾರ್ಮಿಕ ಮತ್ತು ರಾಜಕೀಯ ಕಾರ್ಯಕ್ರಮಗಳು ಅಥವಾ ವ್ಯಾಪಾರ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ. ಇವುಗಳಿಗೆ ವಿವಿಧೋದ್ದೇಶ ವೀಸಾಗಳನ್ನು ನೀಡಲಾಗುತ್ತದೆ ಎಂದು ಗೃಹ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.