Home ಟಾಪ್ ಸುದ್ದಿಗಳು ಖಾಸಗಿ ಬಸ್ ಪಲ್ಟಿ:  ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿಗೆ ಗಾಯ

ಖಾಸಗಿ ಬಸ್ ಪಲ್ಟಿ:  ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿಗೆ ಗಾಯ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿ ಗಾಯಗೊಂಡಿರುವ ಘಟನೆ ಬೇಲೂರು ಹೊರವಲಯದ ಕುವೆಂಪುನಗರದಲ್ಲಿ ನಡೆದಿದೆ.

ಕನಕಪುರದ ಸರ್ಕಾರಿ ಶಾಲೆಯ ಎಸ್’ಎಸ್’ಎಲ್’ಸಿ  ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರವಾಸಕ್ಕೆ ಬಂದಿದ್ದರು. ಕನಕಪುರದಿಂದ ಎರಡು ದಿನಗಳ ಹಿಂದೆ ಎರಡು ಬಸ್’ಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 71 ಮಂದಿ ಪ್ರವಾಸ ಹೊರಟಿದ್ದರು. ಪ್ರವಾಸ ಮುಗಿಸಿ ವಾಪಸ್ ಹೋಗುವಾಗ ಇಂದು ಬೆಳಗ್ಗೆ ಬಸ್ ಪಲ್ಟಿಯಾಗಿದೆ. ಬಸ್’ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಹಾಗೂ ಮೂವರು ಶಿಕ್ಷಕರಿಗೆ ಗಾಯಗಳಾಗಿದ್ದು, ಬೇಲೂರು ಹಾಗೂ ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp
Exit mobile version