ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ ಸಾಧ್ಯತೆ

Prasthutha|

ಬೆಂಗಳೂರು: ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -


ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ.


ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.