ಚಾಲಕನ ನಿಯಂತ್ರಣ ತಪ್ಪಿ ಗುಡ್ಡವೇರಿದ ಬಸ್: ಹಲವರಿಗೆ ಗಾಯ

Prasthutha|

ಬಂಟ್ವಾಳ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ತಾಗಿ ರಸ್ತೆ ಬದಿಯ ಗುಡ್ಡದ ಮೇಲೆ ನಿಂತಿರುವ ಘಟನೆ ವಿಟ್ಲದ ಕೆಲಿಂಜ ಎಂಬಲ್ಲಿ ಶನಿವಾರ ನಡೆದಿದ್ದು, ಓರ್ವ ವಿದ್ಯಾರ್ಥಿನಿ ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

- Advertisement -


ಬಸ್ ಕಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದಾಗ, ಯುವತಿ ಬಸ್ಸಿನ ಕಿಟಕಿಯ ಮೂಲಕ ಹೊರಗೆ ಎಸೆಯಲ್ಪಟ್ಟಿದ್ದಾಳೆ. ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಇತರ ಅನೇಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Join Whatsapp