ಬೆಳಗಾವಿ: ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿಯಲ್ಲಿರುವ ಸಂತ್ರಸ್ತ ಯುವತಿ ನ್ಯಾಯಾಲಯದಲ್ಲಿ ಪ್ರತ್ಯಕ್ಷಗೊಂಡಿದ್ದು, ಯುವತಿ ಏನು ಹೇಳಿಕೆ ನೀಡುತ್ತಿದ್ದರೂ ಅದು ದುರುದ್ದೇಶ ಮತ್ತು ರಾಜಕೀಯ ಪ್ರೇರಿತವಾಗಿ ಆರೋಪ ಮಾಡುತ್ತಿದ್ದಾಳೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
“ಪ್ರಕರಣವು ಬೆಳಗಾವಿ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಬಿರೋದಿಲ್ಲ. ಪ್ರಕರಣದ ಯುವತಿ ದುರುದ್ದೇಶ ಮತ್ತು ರಾಜಕೀಯ ಪ್ರೇರಿತವಾಗಿಆರೋಪ ಮಾಡುತ್ತಿದ್ದಾಳೆ” ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಳಗಾವಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಂಗಳಾ ಅಂಗಡಿಯವ್ರ ನಾಮಪತ್ರ ಸಲ್ಲಿಕೆಯ ನಂತ್ರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ‘ ಯುವತಿ ಎಸ್‌ಐಟಿ ಬಗ್ಗೆ ಆರೋಪ ಮಾತನಾಡ್ತಿರೋದು ಎಲ್ಲರಿಗೂ ಗೊತ್ತಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಎಸ್‌ಐಟಿ ಮೂಲಕ ನಿಷ್ಪಕ್ಷಪಾತ ತನಿಖೆ ಮಾಡುತ್ತಿದ್ದಾರೆ. ತನಿಖೆ ಒಂದು ಹಂತದಲ್ಲಿ ಇದೆ. ರಮೇಶ್ ಜಾರಕಿಹೊಳಿಯವರನ್ನು ಬೆಳಗಾವಿ ಚುನಾವಣಾ ಪ್ರಚಾರಕ್ಕೆ ಬನ್ನಿ ಎಂದು ಕರೆದಿದ್ದೇನೆ ಅವರು ಪ್ರಚಾರಕ್ಕೆ ಬರಲಿ’ ಎಂದು ಅವರು ಕೇಳಿಕೊಂಡಿದ್ದಾರೆ.