Home ಟಾಪ್ ಸುದ್ದಿಗಳು ಲೈಂಗಿಕ ಹಗರಣ: ಇದೆಲ್ಲಾ ರಾಜಕೀಯ ಎಂದ ಎಚ್.ಡಿ. ರೇವಣ್ಣ

ಲೈಂಗಿಕ ಹಗರಣ: ಇದೆಲ್ಲಾ ರಾಜಕೀಯ ಎಂದ ಎಚ್.ಡಿ. ರೇವಣ್ಣ

‘ದೇವೇಗೌಡರ ಕುಟುಂಬದ ಮೇಲೆ ಆರೋಪ ಇದೇ ಮೊದಲಲ್ಲ’


ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ.


ತಮ್ಮ ಮಗ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್ ಡಿ ರೇವಣ್ಣ, ಆತ ಎಲ್ಲೋ ಹೋಗಿರಬಹುದು. ಆದರೆ ವಿಚಾರಣೆಗೆ ಕರೆದರೆ ಬರುತ್ತಾನೆ ಎಂದು ಮಾಜಿ ಸಚಿವರೂ ಆದ ರೇವಣ್ಣ ಸ್ಪಷ್ಟಪಡಿಸಿದ್ದಾರೆ.


‘ನಾನೆಲ್ಲೂ ಓಡಿ ಹೋಗಿಲ್ಲ. ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ. ನಾವು ಕಾನೂನು ರೀತಿ ಈ ಪ್ರಕರಣವನ್ನು ಎದುರಿಸುತ್ತೇವೆ. ಪ್ರಜ್ವಲ್ ಹೋಗಬೇಕಿತ್ತು ಹೋಗಿದಾನೆ. ಕರೆದರೆ ಬರುತ್ತಾನೆ. ತನಿಖೆಗೆ ಕರೆದಾಗ ಪ್ರಜ್ವಲ್ ಬರ್ತಾನೆ’ ಎಂದು ಎಚ್.ಡಿ. ರೇವಣ್ಣ ಹೇಳಿದ್ದಾರೆ.


ದೇವೇಗೌಡರ ಫ್ಯಾಮಿಲಿ ಮೇಲೆ ಅಪವಾದ ಇದೇನು ಹೊಸದಲ್ಲ
ಇದೆಲ್ಲಾ ರಾಜಕೀಯ. ಸರ್ಕಾರ ಅವರದ್ದಿದೆ, ಏನು ಬೇಕಾದರೂ ಮಾಡಲಿ. ತನಿಖೆ ನಡೆಸಿ ಕಾನೂನಿನ ರೀತಿ ಏನಿದೆ ಅದಾಗಲಿ. ದೆವೇಗೌಡರ ಕುಟುಂಬದ ಮೇಲೆ ಆರೋಪ ಇವೇನೂ ಹೊಸದಲ್ಲ. ಮೊದಲಿಂದಲೂ ಇಂಥವನ್ನು ಎದುರಿಸಿದ್ದೇವೆ. ದೇವೇಗೌಡರ ಕುಟುಂಬದ ಮೇಲೆ ಲೋಕಾಯುಕ್ತ, ಸಿಐಡಿ ತನಿಖೆ ಇವೆಲ್ಲವನ್ನೂ ಎದುರಿಸಿದ್ದೇವೆ ಎಂದು ಹೊಳೆನರಸೀಪುರ ಶಾಸಕರಾದ ಅವರು ತಿಳಿಸಿದ್ದಾರೆ.

Join Whatsapp
Exit mobile version