ಲೈಂಗಿಕ ದೌರ್ಜನ್ಯ ಹೇಳಿಕೆ: ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರ ಭೇಟಿ

Prasthutha|

ನವದೆಹಲಿ : ಭಾರತ ಜೋಡೋ ಯಾತ್ರೆಯ ವೇಳೆ ‘ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ’ ಎಂಬ ಹೇಳಿಕೆಗೆ‌ ಸಂಬಂಧಿಸಿದಂತೆ ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿ ನಿವಾಸಕ್ಕೆ ಇಂದು ದೆಹಲಿ ಪೊಲೀಸರು ಭೇಟಿ ನೀಡಿದ್ದಾರೆ.

- Advertisement -

ಈ ಹಿಂದೆ ಶ್ರೀನಗರದಲ್ಲಿ ಹಮ್ಮಿಕೊಂಡಿದ್ದ ಭಾರತ ಜೋಡೋ ಯಾತ್ರೆಯ ವೇಳೆ ‘ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ’ ಎಂಬ ಹೇಳಿಕೆ ನೀಡಿದ್ದರು. ಈ ಸಂಬಂಧ ಕಳೆದ ಗುರುವಾರ ಪೊಲೀಸರು ನೋಟಿಸ್​ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಾಹುಲ್​ ಮನೆಗೆ ತೆರಳಿದ ಪೊಲೀಸರು ಸ್ಪಷ್ಟನೆ ಕೇಳಿದ್ದಾರೆ.

Join Whatsapp